ಬಿಗ್ ಬಾಸ್ (Bigg Boss) ಖ್ಯಾತಿಯ ಚೈತ್ರಾ ಕುಂದಾಪುರ (Chaitra Kundapura) ಮೇ 9ರಂದು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಉಡುಪಿಯ ಹಿರಿಯಡ್ಕದ ಶ್ರೀಕಾಂತ್ ಕಶ್ಯಪ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
ಕಾಲೇಜಿನಲ್ಲಿ ಓದುತ್ತಿದ್ದಾಗ ಶ್ರೀಕಾಂತ್ ಕಶ್ಯಪ್ ಪರಿಚಯವಾಗಿತ್ತು. ಜಗಳದಿಂದ ಶುರುವಾದ ಸ್ನೇಹ ಈಗ ಹಸೆಮಣೆ ಏರಲು ಮುನ್ನುಡಿ ಬರೆದಿದೆ. ಆ್ಯನಿಮೇಷನ್ ಕೋರ್ಸ್ ಮಾಡಿದ್ದ ಶ್ರೀಕಾಂತ್ ಕಶ್ಯಪ್ ಸುದ್ದಿವಾಹಿನಿವೊಂದರಲ್ಲಿ ಚೈತ್ರಾ ಜೊತೆ ಕೆಲಸ ಮಾಡಿದ್ದರು. ಇದೀಗ ಜ್ಯೋತಿಷ್ಯ, ವಾಸ್ತು, ಪೌರೋಹಿತ್ಯದ ಕೆಲಸದಲ್ಲಿ ಶ್ರೀಕಾಂತ್ ತೊಡಗಿಸಿಕೊಂಡಿದ್ದಾರೆ. ಸತತ 12 ವರ್ಷಗಳ ಪ್ರೀತಿಗೆ ಮದುವೆ ಮುದ್ರೆ ಒತ್ತಲು ಈ ಜೋಡಿ ಸಜ್ಜಾಗಿದೆ.
ನಮ್ಮದು 12 ವರ್ಷಗಳ ಪ್ರೀತಿ. ಲವ್ ಕಮ್ ಅರೇಂಜ್ ಮ್ಯಾರೇಜ್ ಆಗಿದೆ. ಗುರುಹಿರಿಯರ ಸಮ್ಮತಿಯ ಮೇರೆಗೆ ಪ್ರೀತಿಸಿದ ಹುಡುಗನೊಂದಿಗೆ ಮೇ 9ರಂದು ಕುಂದಾಪುರದಲ್ಲಿ ಮದುವೆ ಆಗುತ್ತಿದ್ದೇನೆ. ಈಗಾಗಲೇ ಮೆಹಂದಿ ಸೇರಿದಂತೆ ಮದುವೆ ಶಾಸ್ತ್ರಗಳು ಆರಂಭ ಆಗಿದೆ. ಕುಟುಂಬಕ್ಕೆ ಆಪ್ತರಾದ 100 ಜನರಿಗೆ ಮಾತ್ರ ಮದುವೆಗೆ ಆಹ್ವಾನಿಸಿದ್ದೇವೆ. ದೇವಸ್ಥಾನವೊಂದರಲ್ಲಿ ಸರಳವಾಗಿ ಮದುವೆಯಾಗುತ್ತಿದೆ. ವೈದಿಕ ಶಾಸ್ತ್ರದಂತೆ ಮದುವೆ ಕಾರ್ಯಕ್ರಮ ನಡೆಯಲಿದೆ ಎಂದಿದ್ದಾರೆ.
ಇತ್ತೀಚೆಗೆ ‘ಮಜಾ ಟಾಕೀಸ್’ ಶೋಗೆ ಬಿಗ್ ಬಾಸ್ ಸ್ಪರ್ಧಿಗಳಾದ ಧರ್ಮ ಕೀರ್ತಿರಾಜ್, ಅನುಷಾ ರೈ ಹಾಗೂ ಚೈತ್ರಾ ಎಂಟ್ರಿ ಕೊಟ್ಟಿದ್ದರು. ಚೈತ್ರಾ ಕುಂದಾಪುರ ಅವರಿಗೆ ಮದುವೆ ಫಿಕ್ಸ್ ಅಗಿದೆ ಎನ್ನುತ್ತಲೇ ಸೃಜನ್ ಲೋಕೇಶ್ ಮಾತು ಶುರು ಮಾಡಿದ್ದರು. ಚೈತ್ರಾಗೆ ಸೃಜನ್ ಲವ್ ಅಥವಾ ಅರೇಂಜ್ಡ್ ಮ್ಯಾರೇಜಾ ಎಂಬ ಪ್ರಶ್ನಿಸಿದ್ದರು. ಇದಕ್ಕೆ ಎರಡು ಎಂದು ಚೈತ್ರಾ ಉತ್ತರ ನೀಡಿದ್ದರು. ಈ ಮಧ್ಯೆ ಅವರದ್ದು 12 ವರ್ಷದ ಲವ್ ಸ್ಟೋರಿ ಎಂಬ ಅನುಷಾ ರೈ ಮಾತಿಗೆ, ಚೈತ್ರಾ ಯೆಸ್ ಕಾಲೇಜಿನಲ್ಲಿ ಲವ್ ಶುರುವಾಗಿದ್ದು ಅನ್ನೋ ವಿಚಾರವನ್ನು ರಿವೀಲ್ ಮಾಡಿದ್ದರು.